Skip to main content
ಬೆಂಗಳೂರಿನ ಯಶ್ ಆರಾಧ್ಯ ಗೆ  ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ  ಪುರಸ್ಕಾರ

ಬೆಂಗಳೂರಿನ ಯಶ್ ಆರಾಧ್ಯ ಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕಾರ

ಬೆಂಗಳೂರಿನ ಯಶ್ ಆರಾಧ್ಯಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

ಯಶ್

ದೆಹಲಿ: ಬೆಂಗಳೂರಿನ ಯಶ್ ಆರಾಧ್ಯ ಪ್ರತಿಷ್ಠಿತ ಪ್ರಧಾ ನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ಮೋಟಾರ್ ಸ್ಪೋರ್ಟ್ಸ್ ಪಟು ಎನ್ನುವ ಹಿರಿಮೆಗೆ ಗುರುವಾರ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಶ್ರೀ.ರಾಮ್ ನಾಥ್ ಕೋವಿಂದ್ ಅವರಿಂದ ಯಶ್ ಪ್ರಶಸ್ತಿ ಸ್ವೀಕರಿಸಿದರು. 9ನೇ ವಯಸ್ಸಿನಿಂದಲೇ ರೇಸಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯಶ್ ತಮ್ಮ ಸಾ ಧನೆಯ ಹಾದಿಯಲ್ಲಿ 13 ಚಾಂಪಿಯನ್ ಶಿಪ್ ಗಳನ್ನು ಗೆದ್ದಿದ್ದಾರೆ. 17 ವರ್ಷದ ರೇಸರ್ ಈ ವರೆಗೂ 65 ಬಾರಿ ಪೋಡಿಯಂ ಫಿನಿಶ್ ಮಾಡಿದ್ದು, 12 ಪ್ರಶಸ್ತಿಗಳನ್ನು ತಮ್ಮ ಹೆಸರಿಗೆ ಸೇರ್ಪಡೆಗೊಳಿಸಿಕೊಂಡಿದ್ದಾರೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ, 18 ವಯಸ್ಸಿನೊಳಗಿನ ಅಸಾಧಾರಣ ವಿದ್ಯಾರ್ಥಿಗಳು ವಿವಿಧ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ನೀಡುವ ಭಾರತದ ಅತ್ಯುನ್ನತ ಪ್ರಶಸ್ತಿಯಾಗಿದೆ. ಯಶ್ ಸೇರಿದಂತೆ 49 ಪ್ರತಿಭಾವಂತರನ್ನು ಈ ಪ್ರಶಸ್ತಿಗೆ, ಕೇಂದ್ರ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಆಯ್ಕೆ ಮಾಡಿತ್ತು. ಈ ಪ್ರತಿಭಾವಂತ ವಿದ್ಯಾರ್ಥಿಗಳು ಜನವರಿ 26ರಂದು ಗಣರಾಜ್ಯೋತ್ಸವದ ಪರೇಡ್ ಗೂ ಮುನ್ನ ಪ್ರಧಾನ ಮಂತ್ರಿಯವರನ್ನು ಸಹ ಭೇಟಿ ಮಾಡಲಿದ್ದಾರೆ.

‘ನನ್ನನ್ನು ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕೆ ಭಾರತ ಸರ್ಕಾರಕ್ಕೆ ‘ ಧನ್ಯವಾದ ಹೇಳಲು ಇಚ್ಛಿಸುತ್ತೇನೆ ಹಾಗೂ ವಿನಮ್ರತೆಯಿಂದ ಸ್ವೀಕರಿಸುತ್ತೇನೆ. ಗೌರವಾನ್ವಿತ ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ್ದು ಹಾಗೂ ಪ್ರಧಾ ನಿಯನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದು ದೊಡ್ಡ ಗೌರವ.

ನನ್ನ ವೃತ್ತಿಬದುಕಿನಲ್ಲಿ ಸಾಕಷ್ಟು ಪರಿಶ್ರಮ ವಹಿಸಿದ್ದೇನೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಣನೀಯ ಯಶಸ್ಸು ಸಾಧಿಸಿದ ನಂತರ ಈ ಗೌರವ ಸಿಗುತ್ತಿರುವುದು ಸಂತಸ ನೀಡಿದೆ’ ಎಂದು ಯಶ್ ಪ್ರಶಸ್ತಿ ಸ್ವೀಕರಿಸಿದ ಬಳಿಕ ಹೇಳಿದರು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.