Skip to main content
ಹೊಂಬಾಳೆ ಫಿಲಂಸ್ ನಿರ್ಮಾಣದ ಇಂಡಿಯನ್ ಸಿನಿಮಾ ಸಲಾರ್ ಚಿತ್ರಕ್ಕೆ ಜ.15ರಂದು ಮುಹೂರ್ತ.

ಹೊಂಬಾಳೆ ಫಿಲಂಸ್ ನಿರ್ಮಾಣದ ಇಂಡಿಯನ್ ಸಿನಿಮಾ ಸಲಾರ್ ಚಿತ್ರಕ್ಕೆ ಜ.15ರಂದು ಮುಹೂರ್ತ.

ಹೊಂಬಾಳೆ ಫಿಲಂಸ್ ನಿರ್ಮಾಣದ ಇಂಡಿಯನ್ ಸಿನಿಮಾ ಸಲಾರ್ ಚಿತ್ರಕ್ಕೆ ಜ.15ರಂದು ಮುಹೂರ್ತ.

Prabhas

 ಹೈದರಾಬಾದ್ನಲ್ಲಿ ಸೆಟ್ಟೇರಲಿದೆ ಪ್ರಭಾಸ್- ಪ್ರಶಾಂತ್ ಕಾಂಬಿನೇಷನ್ ಸಿನಿಮಾ - ಚಿತ್ರದಲ್ಲಿ ತಮ್ಮ ಲುಕ್ ರಿವೀಲ್ ಮಾಡಲು ಕಾತರರಾಗಿದ್ದಾರಂತೆ ಪ್ರಭಾಸ್ ಹೊಂಬಾಳೆ ಫಿಲಂಸ್ ಬ್ಯಾನರ್ನಲ್ಲಿ ಸಿದ್ಧವಾಗಲಿರುವ ಸಲಾರ್ ಸಿನಿಮಾ ಸೆಟ್ಟೇರುವುದಕ್ಕೂ ಮುನ್ನ ದೇಶಾದ್ಯಂತ ದೊಡ್ಡ ಮಟ್ಟದ ಸದ್ದು ಮಾಡಿದೆ. ಇದೀಗ ಇದೇ ಚಿತ್ರತಂಡ ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ ಮುಹೂರ್ತವನ್ನೂ ನೆರವೇರಿಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದೆ. ಜ. 15ರ ಶುಭ ಶುಕ್ರವಾರದಂದು ಚಿತ್ರದ ಮುಹೂರ್ತ ನೆರವೇರಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರ ಇಂಡಿಯನ್ ಸಿನಿಮಾ ಎಂದು ಚಿತ್ರನಿರ್ಮಾಣ ಸಂಸ್ಥೆಯೇ ಹೇಳಿಕೊಂಡಿದೆ. ಅದರಂತೆ ಇದೀಗ ಚಿತ್ರದ ಮುಹೂರ್ತಕ್ಕೆ ತಂಡ ತಯಾರಿ ನಡೆಸಿದ್ದು, ಶುಕ್ರವಾರ ಹೈದರಾಬಾದ್ನಲ್ಲಿ 11 ಗಂಟೆಗೆ ನೆರವೇರಲಿದೆ. ಈ ವಿಶೇಷ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ನೆರದಿರಲಿದೆ.

ಮುಖ್ಯ ಅತಿಥಿಯಾಗಿ ರಾಜ್ಯದ ಉನ್ನತ ಶಿಕ್ಷಣ ಸಚಿವರು ಮತ್ತು ಉಪಮುಖ್ಯಮಂತ್ರಿಗಳೂ ಆಗಿರುವ ಡಾ. ಅಶ್ವತ್ಥನಾರಾಯಣ್ ಸಿ.ಎನ್ ಭಾಗವಹಿಸಲ್ಲಿದ್ದಾರೆ. ನಟ ರಾಕಿಂಗ್ ಸ್ಟಾರ್ ಯಶ್ ಈ ಮುಹೂರ್ತ ಕಾರ್ಯಕ್ರಮದಲ್ಲಿ ಇರಲಿದ್ದು, ಟಾಲಿವುಡ್ನ ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಸಹ ಭಾಗವಹಿಸಲಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕವೇ ಸಲಾರ್ ಚಿತ್ರ ದೇಶವ್ಯಾಪಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಪ್ರಭಾಸ್ ಲುಕ್ ಸಹ ಅಷ್ಟೇ ಕುತೂಹಲ ಕೆರಳಿಸಿದೆ.

ಇದೀಗ ತಮ್ಮ ಲುಕ್ ಬಗ್ಗೆಯೂ ಪ್ರಭಾಸ್ ಮಾತನಾಡಿದ್ದಾರೆ. ‘ಈ ಸಿನಿಮಾದ ಮುಹೂರ್ತ ಮತ್ತು ಶೂಟಿಂಗ್ನಲ್ಲಿ ಪಾಲ್ಗೊಳ್ಳುವುದಕ್ಕೆ ನಾನು ತುಂಬ ಕೌತುಕನಾಗಿದ್ದೇನೆ. ನನ್ನ ಲುಕ್ ಹೇಗಿರಲಿದೆ ಎಂಬುದನ್ನು ಅಭಿಮಾನಿಗಳಿಗೆ ತೋರಿಸಲು ಅಷ್ಟೇ ಉತ್ಸುಕನಾಗಿದ್ದೇನೆ ಎಂದಿದ್ದಾರೆ ಪ್ರಭಾಸ್. ಶುಕ್ರವಾರ ಮುಹೂರ್ತ ಮುಗಿಸಿಕೊಂಡ ಸಿನಿಮಾ ಇದೇ ತಿಂಗಳ ಮಾಸಾಂತ್ಯಕ್ಕೆ ಚಿತ್ರೀಕರಣಕ್ಕೂ ಚಾಲನೆ ನೀಡಲಿದೆ. ಈಗಾಗಲೇ ಅದಕ್ಕಾಗಿ ಭರ್ಜರಿ ತಯಾರಿ ಸಹ ಶುರುವಾಗಿದೆ. ಇನ್ನುಳಿದ ಪಾತ್ರವರ್ಗದ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ನೀಡಲಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.