Skip to main content
​    ​​    ​ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಮಡ್ಡಿ ಸಿನಿಮಾ ಬಿಡುಗಡೆ

ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಮಡ್ಡಿ ಸಿನಿಮಾ ಬಿಡುಗಡೆ

ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಮಡ್ಡಿ ಸಿನಿಮಾ ಬಿಡುಗಡೆ.

Kannada new film

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಇಂಗ್ಲೀಷ್ ಭಾಷೆಗಳಲ್ಲಿ ಬಿಡುಗಡೆ ಹೊಸಬರು ಪಳಗಿದ ತಂತ್ರಜ್ಱರ ಜತೆ ಸೇರಿ ಅಂತಾರಾಷ್ಟ್ರೀಯ ಸಿದ್ಧವಾದ ಹೊಸ ಪ್ರಯತ್ನವೇ ಮಡ್ಡಿ ಸಿನಿಮಾ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಈ ಸಿನಿಮಾ ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ.

ಪಿಕೆ7 ಪ್ರೊಡಕ್ಷನ್ಸ್ ಹೌಸ್ ಅಡಿಯಲ್ಲಿ ಪ್ರೇಮ್ ಕೃಷ್ಣ ದಾಸ್ ನಿರ್ಮಾಣದಲ್ಲಿ ಡಾ. ಪ್ರಗ್ಬಲ್ ದಾಸ್ ನಿರ್ದೇಶನದ ಮೊದಲ ಹೆಜ್ಜೆ. ಈ ಚಿತ್ರದ ಮೊದಲ ಟೀಸರ್ ಕೆಲ ತಿಂಗಳ ಹಿಂದಷ್ಟೇ ಬಿಡುಗಡೆ ಆಗಿದ್ದು, ಅಭೂತಪೂರ್ವ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ. ಅದೇ ರೀತಿ ಚಿತ್ರಕ್ಕೆ ಒಟಿಟಿಯಿಂದಲೂ ಬೇಡಿಕೆ ಬಂದಿದ್ದು, ಒಟಿಟಿ ತ್ಯಜಿಸಿ ಚಿತ್ರಮಂದಿರದಲ್ಲಿಯೇ ಸಿನಿಮಾ ರಿಲೀಸ್ ಮಾಡಲು ತಂಡ ನಿರ್ಧರಿಸಿದೆ. ಈ ಚಿತ್ರದ ಕಲಾವಿದರೆಲ್ಲ ಯಾವುದೇ ಡ್ಯೂಪ್ ಬಳಸದೆ ಹಲವು ಶೈಲಿಯ ಮಡ್​ ರೇಸ್​ನಲ್ಲಿ ಪರಿಣಿತಿ ಪಡೆದಿದ್ದಾರೆ.

Kannada new film

ಒಟ್ಟು 13 ಕ್ಯಾಮರಾಗಳನ್ನು ಶೂಟಿಂಗ್ನಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ರಾಕ್ಷಸನ್ ಸಿನಿಮಾ ಖ್ಯಾತಿಯ ಸ್ಯಾನ್​ ಲೋಕೇಶ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕೆಜಿಎಫ್ ಸಿನಿಮಾ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಹಾಲಿವುಡ್​ ಸಿನಿಮಾಗಳ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿರುವ ಕೆ.ಜಿ ರತೀಶ್​ ಈ ಸಿನಿಮಾಕ್ಕೆ ಕ್ಯಾಮರಾಮನ್ ಆಗಿದ್ದಾರೆ. ಕಲರಿಸ್ಟ್​ ಆಗಿ ರಂಗ ಕೆಲಸ ಮಾಡಿದ್ದಾರೆ. ಕಳೆದ ಐದು ವರ್ಷಗಳ ಕಾಲ ಮಡ್ ರೇಸ್​ ಬಗ್ಗೆ ಅಧ್ಯಯನ ನಡೆಸಿ ಈ ಸಿನಿಮಾ ಮಾಡಿರುವ ಪ್ರಗ್ಬಲ್​, ಎರಡು ತಂಡಗಳ ನಡುವಿನ ಸ್ಪರ್ಧೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ.

ಇದರ ಜತೆಗೆ ಫ್ಯಾಮಿಲಿ ಸೆಂಟಿಮೆಂಟ್, ಭಾವನಾತ್ಮಕ ಅಂಶಗಳು ಮತ್ತು ಅಡ್ವೆಂಚರಸ್​ ತಿರುವುಗಳನ್ನೂ ಈ ಸಿನಿಮಾದಲ್ಲಿ ಮಿಶ್ರಣ ಮಾಡಿದ್ದಾರೆ. ಈ ಹಿಂದೆ ಚಿತ್ರದ ಮೋಷನ್ ಪೋಸ್ಟರ್ ಅನ್ನು ಕಾಲಿವುಡ್ ನಟ ವಿಜಯ್ ಸೇತುಪತಿ, ಕನ್ನಡದಲ್ಲಿ ಶ್ರೀಮುರಳಿ, ಬಾಲಿವುಡ್ ನಟ ಅರ್ಜುನ್ ಕಪೂರ್ ಬಿಡುಗಡೆ ಮಾಡಿದ್ದರು. ಅದಾದ ಬಳಿಕ ಹಲವು ಭಾಷೆಗಳ ಟೀಸರ್​ ಅನ್ನು ಶಿವರಾಜಕುಮಾರ್, ಫಹಾದ್ ಪಾಸಿಲ್, ಉನ್ನಿ ಮುಕುಂದನ್, ಅಪರ್ಣ ಬಾಲಮುರಳಿ ಸೇರಿ ಹಲವು ಸ್ಟಾರ್ ನಟರು ಬಿಡುಗಡೆ ಮಾಡಿದ್ದರು. ನೈಜ ಅರಣ್ಯ ಪ್ರದೇಶದಲ್ಲಿ ಇಡೀ ಸಿನಿಮಾದ ಶೂಟಿಂಗ್ ಆಗಿದ್ದು, ಸಿಂಕ್ ಸೌಂಡ್ ಟೆಕ್ನಾಲಜಿ ಬಳಸಿ ಸಿನಿಮಾ ಮೂಡಿಬಂದಿದ್ದು, ಬಹುತೇಕ ಹೊಸಬರೇ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಯುವನ್, ರಿಧಾನ್ ಕೃಷ್ಣ, ಅನುಷಾ ಸುರೇಶ್, ಅಮಿತ್ ಶಿವದಾಸ್ ನಾಯರ್, ಹರೀಶ್ ಪೆರಾಡಿ, ವಿಜಯನ್, ರೆಂಜಿ ಪೆನಿಕರ್ ತಾರಾಗಣದಲ್ಲಿದ್ದಾರೆ.

ಈ ಹಿಂದೆ ಈ ಚಿತ್ರದ ಟೀಸರ್ ಅನ್ನು ಹಲವು ಭಾಷೆಗಳಲ್ಲಿ ಆಯಾ ಭಾಷೆಯ ಸ್ಟಾರ್ ಕಲಾವಿದರು ಟೀಸರ್ ಬಿಡುಗಡೆ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೀಗ ಈ ಬಹುನಿರೀಕ್ಷಿತ ಸಿನಿಮಾ ಡಿ.10ಕ್ಕೆ ಚಿತ್ರ ಬಿಡುಗಡೆ ಆಗುತ್ತಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.