ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ "ಕಡಲ ತೀರದ ಭಾರ್ಗವ" ಚಿತ್ರದ ಹಾಡು.
ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ "ಕಡಲ ತೀರದ ಭಾರ್ಗವ" ಚಿತ್ರದ ಹಾಡು.

ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿಗೆ ಭಾರಿ ಮೆಚ್ಚುಗೆ. ವಿಭಿನ್ನ ಕಥಾಹಂದರ ಹೊಂದಿರುವ "ಕಡಲ ತೀರದ ಭಾರ್ಗವ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ "ಸಮಯವೆ" ಎಂಬ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡು ಎ ಆರ್ ಪಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.
ಅನಿಲ್ ಸಿ.ಜೆ ಸಂಗೀತ ನೀಡಿರುವ ಈ ಹಾಡಿಗೆ ಅಪಾರ ಮೆಚ್ಚುಗೆ ಕೂಡ ವ್ಯಕ್ತವಾಗಿದೆ. ಚಿತ್ರದ ನಾಯಕರಲ್ಲೊಬ್ಬರಾದ ಭರತ್ ಅವರನ್ನು ಪರಿಚಯಯಿಸುವ ಗೀತೆಯಾಗಿ ಈ ಹಾಡು ಮೂಡಿಬಂದಿದೆ. ಸದ್ಯದಲ್ಲೇ ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಲಿದ್ದು, ಜನವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆಯಿದೆ. ಏವಕಲ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ವರುಣ್ ರಾಜು ಪಟೇಲ್ ಹಾಗೂ ಭರತ್ ಗೌಡ ಈ ಚಿತ್ರದ ನಿರ್ಮಾಪಕರು. ವಿಜಯಂ ವಜ್ರ ವೆಂಕ್ಚರ್ಸ್ ಸಹ ನಿರ್ಮಾಣ ಈ ಚಿತ್ರಕ್ಕಿದೆ. ನಿರ್ಮಾಪಕರಾದ ಭರತ್ ಗೌಡ ಹಾಗೂ ವರುಣ್ ರಾಜು ಪಟೇಲ್ ಈ ಚಿತ್ರದ ನಾಯಕರಾಗೂ ಅಭಿನಯಿಸಿದ್ದಾರೆ.
ಶೃತಿ ಪ್ರಕಾಶ್ ಈ ಚಿತ್ರದ ನಾಯಕಿ. ಈಟಿವಿ ಶ್ರೀಧರ್, ರಾಘವ್ ನಾಗ್ , ಅಶ್ವಿನ್ ಹಾಸನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಉಡುಪಿ, ಮುರುಡೇಶ್ವರ ಹಾಗೂ ಇನ್ನಿತರ ಕರಾವಳಿಯ ಕಡಲತೀರಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪನ್ನಗ ಸೋಮಶೇಖರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅನಿಲ್ ಸಿ ಜೆ ಸಂಗೀತ ನಿರ್ದೇಶನ, ಕೀರ್ತನ್ ಪೂಜಾರ್ ಛಾಯಾಗ್ರಹಣ ಹಾಗೂ ಆಶಿಕ್ ಕುಸುಗೊಳ್ಳಿ , ಉಮೇಶ್ ಭೋಸಗಿ ಅವರ ಸಂಕಲನವಿದೆ.
Recent comments