Skip to main content
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹುಟ್ಟುಹಬ್ಬದಂದು ನೂತನ ಚಿತ್ರದ ಪೋಸ್ಟರ್ ಬಿಡುಗಡೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹುಟ್ಟುಹಬ್ಬದಂದು ನೂತನ ಚಿತ್ರದ ಪೋಸ್ಟರ್ ಬಿಡುಗಡೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹುಟ್ಟುಹಬ್ಬದಂದು ನೂತನ ಚಿತ್ರದ ಪೋಸ್ಟರ್ ಬಿಡುಗಡೆ.

ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹುಟ್ಟುಹಬ್ಬದಂದು ನೂತನ ಚಿತ್ರದ ಪೋಸ್ಟರ್ ಬಿಡುಗಡೆ.

ಜುಲೈ 12 ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಇದೇ ಸಂದರ್ಭದಲ್ಲಿ ಅವರು ನಟಿಸಲಿರುವ ನೂತನ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಶಿವರಾಜಕುಮಾರ್ ಅವರೆ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಈ ನೂತನ ಚಿತ್ರವನ್ನು (ಪ್ರೊಡಕ್ಷನ್ ನಂ ೧) ತೆಲುಗಿನ ಸ್ವಾತಿ ವನಪಲ್ಲಿ, ಶ್ರೀಕಾಂತ್ ದುಲಿಪುಡಿ ಹಾಗೂ ನರಳ ಶ್ರೀನಿವಾಸ ರೆಡ್ಡಿ ಬಾಲಶ್ರೀರಾಮ್ ಸ್ಟುಡಿಯೋ ಲಾಂಛನದಲ್ಲಿ ನಿರ್ಮಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಎಮೋಷನಲ್ ಹಾಗೂ ಮಿಲಟರಿ ಹಿನ್ನೆಲೆಯ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಮ್ ದುಲಿಪುಡಿ ನಿರ್ದೇಶಿಸುತ್ತಿದ್ದಾರೆ. ತೆಲುಗಿನಲ್ಲಿ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ಇವರಿಗೆ, ಕನ್ನಡದಲ್ಲಿ ಇದು ಚೊಚ್ಚಲ ಚಿತ್ರ. ಕೊರೋನ ಲಾಕ್ ಡೌನ್ ಮುಗಿದು ಸರ್ಕಾರದ ಅನುಮತಿ ಸಿಕ್ಕ ನಂತರ ಚಿತ್ರೀಕರಣ ಆರಂಭವಾಗಲಿದೆ. ಚಿಕ್ಕಮಗಳೂರು, ಕಾಶ್ಮೀರ ಹಾಗೂ ಯುನೈಟೆಡ್ ಸ್ಟೇಟ್ಸ್ ನಲ್ಲಿ ಚಿತ್ರೀಕರಣ ಮಾಡುವ ಮಾಹಿತಿ ಚಿತ್ರತಂಡದಿಂದ ದೊರೆತಿದೆ. ಶಿವರಾಜಕುಮಾರ್ ಅವರು ನಾಯಕರಾಗಿ ನಟಿಸಲಿರುವ ಈ ಚಿತ್ರದ ನಾಯಕಿಯಾಗಿ ಖ್ಯಾತ ನಟಿಯೊಬ್ಬರು ಅಭಿನಯಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಮಾಹಿತಿ ಸದ್ಯದಲ್ಲೇ ತಿಳಿಸಲಾಗುವುದು. ಶ್ರೀಚರಣ್ ಪಕಾಲ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ರವಿಕುಮಾರ್ ಸನಾ ಅವರ ಛಾಯಾಗ್ರಹಣದಲ್ಲಿ ಚಿತ್ರದ ಸುಂದರ ಸನ್ನಿವೇಶಗಳು ಸೆರೆಯಾಗಲಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.