ಐಸಿಸಿ ಟೆಸ್ಟ್ ಅಗ್ರ ಸ್ಥಾನದಲ್ಲಿ ವಿರಾಟ್ ಕೊಹ್ಲಿ .
ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ಕೊಹ್ಲಿ, ಒಂದು ಸ್ಥಾನ ಕುಸಿದ ರಹಾನೆ
ದುಬೈ,: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಬಿಡುಗಡೆ ಮಾಡಿರುವ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಡಿಸೆಂಬರ್ ಮೊದಲ ವಾರದಲ್ಲೇ ಅವರು ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವನ್ ಸ್ಮಿತ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೆ ಮರಳಿದ್ದರು.