ಕ್ರೈಂ ಥ್ರಿಲ್ಲರ್ ಕಥಾಹಂದರದ "ಆಪರೇಶನ್ D" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.
ಕ್ರೈಂ ಥ್ರಿಲ್ಲರ್ ಕಥಾಹಂದರದ "ಆಪರೇಶನ್ D" ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

ನಟನಾಗಿದ್ದ ತಿರುಮಲೇಶ್ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶ. ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ 'ಆಪರೇಶನ್ D" ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮಾತಿನ ಭಾಗದ ಚಿತ್ರೀಕರಣ ಮುಗಿದಿದೆ. ನಾಲ್ಕು ಹಾಡು ಹಾಗೂ ಮೂರು ಸಾಹಸ ಸನ್ನಿವೇಶಗಳ ಚಿತ್ರೀಕರಣ ಬಾಕಿಯಿದೆ.
ಕಲಾವಿದರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ತಿರುಮಲೇಶ್ ತಿರುಪತಿ, ಬಣ್ಣಬಣ್ಣದ ಲೋಕ, ಮಸ್ತಿ, ಬೀರಬಲ್, ಭಗವಾನ್ ಶ್ರೀ ರಾಮನುಜ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆಯಿಟ್ಟರುವ ತಿರುಮಲೇಶ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ರಾಜಶಂಕರ್, ತಿರುಮಲೇಶ್, ಸಿದ್ದರಾಜು, ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ವೇದಿಕ ಹಾಗೂ ದ್ವೈಪಾಯನ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
ಕೆಂಪಗಿರಿ ಹಾಗೂ ವೇದಿಕ ಹಾಡುಗಳನ್ನು ರಚಿಸಿದ್ದಾರೆ. ಕಾರ್ತಿಕ್ ಪ್ರಸಾದ್ ಛಾಯಾಗ್ರಹಣ, ವಿಕ್ರಮ್ ಶ್ರೀಧರ್ ಸಂಕಲನ ಹಾಗೂ ಜೆ.ಹರಿಪ್ರಸಾದ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ವಿನೋದ್ ದೇವ್, ಸುಹಾಸ್ ಆತ್ರೇಯ(ಕಮಲಿ ಧಾರಾವಾಹಿ), ರುದ್ರೇಶ್ ಬುದನೂರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯರಾಗಿ ಸ್ನೇಹ ಭಟ್, ಇಂಚರ(U2 ನಿರೂಪಕಿ) ಇದ್ದಾರೆ. ಶಿವಮಂಜು, ವೆಂಕಟಾಚಲ, ರಂಗನಾಥ ಬಿ, ಶ್ರೀಧರ್ ಟಿ ಎಸ್, ಸುರೇಶ್ ಬಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Recent comments