ಕೃಷ್ಣನ ಹೊಸ ಅವತಾರ "ಕೃಷ್ಣ ಟಾಕೀಸ್ ಚಿತ್ರ ತೆರೆಗೆ ಬರಲು ಸಿದ್ದ.
ಕೃಷ್ಣ ಟಾಕೀಸ್ ಸಿದ್ದ.

ಅಜೇಯ್ ರಾವ್ ನಾಯಕನಾಗಿ ನಟಿಸಿರುವ ಕೃಷ್ಣ ಟಾಕೀಸ್ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಗೋಕುಲ್ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದ ರಾಜು ಎ.ಹೆಚ್ ನಿರ್ಮಿಸಿದ್ದಾರೆ. ಕೊರೋನ ಲಾಕ್ ಡೌನ್ ಮುಗಿದ ಮೇಲೆ ಕರ್ನಾಟಕದ ಅನೇಕ ಟಾಕೀಸ್ ನಲ್ಲಿ ಕೃಷ್ಣ ಟಾಕೀಸ್ ಬಿಡುಗಡೆಯಾಗಲಿದೆ. ಲವರ್ ಬಾಯ್ ಪಾತ್ರಗಳಲ್ಲಿ ಹೆಚ್ಚು ಕಾಣಿಸಿಕೊಂಡಿರುವ ಅಜೇಯ್ ರಾವ್ ಅವರದು ಕೃಷ್ಣ ಟಾಕೀಸ್ ನಲ್ಲಿ ವಿಭಿನ್ನ ಪಾತ್ರ... ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ಈ ಚಿತ್ರದಲ್ಲಿ ಅಜೇಯ್ ರಾವ್ ಅವರು ಹಿಂದೆ ನೋಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕ ರು ತಿಳಿಸಿದ್ದಾರೆ.

ಈಗಾಗಲೇ ಚಿತ್ರದ ಟೀಸರ್ ಹಾಗೂ ಲಿರಿಕಲ್ ವಿಡಿಯೋ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದ್ದು, ಚಿತ್ರರಸಿಕರಿಂದ ಮೆಚ್ಚುಗೆ ಪಡೆದಿದೆ. ವಿಜಯಾನಂದ್ ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮದ ಸಂಗೀತ ನೀಡಿದ್ದಾರೆ. ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ವಿರುವ ಈ ಚಿತ್ರದ ತಾರಾಬಳಗದಲ್ಲಿ ಅಜೇಯ್ ರಾವ್, ಅಪೂರ್ವ, ಸಿಂಧು ಲೋಕನಾಥ್, ಚಿಕ್ಕಣ್ಣ, ಮಂಡ್ಯ ರಮೇಶ್, ಶೋಭ್ ರಾಜ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ...
Recent comments