Skip to main content
ಕೊಡಗನೂರು ಜಯಕುಮಾರ್‌ ನಿಧನ

ಕೊಡಗನೂರು ಜಯಕುಮಾರ್‌ ನಿಧನ

ಕೊಡಗನೂರು ಜಯಕುಮಾರ್‌ ನಿಧನ .

Kannada film

ರಂಗಭೂಮಿ, ಸಿನಿಮಾ, ಕಿರುತೆರೆಯ ಹಿರಿಯ ಕಲಾವಿದ ಕೊಡಗನೂರು ಜಯಕುಮಾರ್‌ (72 ವರ್ಷ) ಇಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆಯಲ್ಲಿ ಹೃದಯಾಘಾತದಿಂದ ಅಗಲಿದ್ದಾರೆ. ದಾವಣಗೆರೆ ಸಮೀಪ ಕೊಡಗನೂರು ಅವರ ಜನ್ಮಸ್ಥಳ. ವೃತ್ತಿರಂಗಭೂಮಿ ಜೊತೆ ಅವರದು ಸುಮಾರು ನಾಲ್ಕೂವರೆ ದಶಕಗಳ ಒಡನಾಟ. ಕನ್ನಡ ವೃತ್ತಿರಂಗಭೂಮಿಯಲ್ಲಿ ಅವರು ಜ್ಯೂನಿಯರ್ ರಾಜಕುಮಾರ್ ಎಂದೇ ಹೆಸರಾದವರು. ಗುಬ್ಬಿ ಕಂಪನಿ, ಕೆಬಿಆರ್‌ ಕಂಪನಿ, ಕುಮಾರೇಶ್ವರ ನಾಟಕ ಸಂಘ, ಶ್ರೀ ಶೈಲ ಮಲ್ಲಿಕಾರ್ಜುನ ನಾಟ್ಯ ಸಂಘ, ಕರ್ನಾಟಕ ಕಲಾ ವೈಭವ ಸಂಘ, ಸಂಗಮೇಶ್ವರ ನಾಟಕ ಸಂಘಗಳ ಹಲವಾರು ನಾಟಕಗಳಲ್ಲಿ ಜಯಕುಮಾರ್ ಅಭಿನಯಿಸಿದ್ದಾರೆ. ಪೊಲೀಸನ ಮಗಳು, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಮಹಾತ್ಮೆ, ಮದಕರಿನಾಯಕ, ಮುದುಕನ ಮದುವೆ, ಟಿಪ್ಪು ಸುಲ್ತಾನ, ಗೋಮುಖ ವ್ಯಾಘ್ರ, ರಾಷ್ಟ್ರವೀರ ಎಚ್ಚಮ್ಮನಾಯಕ ಅವರಿಗೆ ಜನಪ್ರಿಯತೆ ತಂದುಕೊಟ್ಟ ನಾಟಕಗಳು.

Kannada film

ರಂಗಭೂಮಿಯ ಹೆಸರಾಂತ ನಿರ್ದೇಶಕರಾದ ಪಿ.ಬಿ.ದುತ್ತರಗಿ, ಆರ್‌.ಡಿ.ಕಾಮತ್‌ ಅವರ ನಾಟಕಗಳಲ್ಲಿ ನಟಿಸಿದ್ದಾರೆ. ಮುಸುರಿ ಕೃಷ್ಣಮೂರ್ತಿ, ಸುಂದರ ಕೃಷ್ಣ ಅರಸ್‌, ಜಿ.ವಿ.ಚನ್ನಬಸಪ್ಪ, ಎಚ್‌.ಟಿ.ಅರಸ್‌, ಉಮಾಶ್ರೀ, ದಿನೇಶ್‌, ಉದಯಕುಮಾರ್‌, ಸುಧೀರ್‌, ಓಬಳೇಶ್ವರ್‌ ಸೇರಿದಂತೆ ವೃತ್ತಿರಂಗಭೂಮಿಯ ಹೆಸರಾಂತ ಕಲಾವಿದರೊಂದಿಗೆ ಅಭಿನಯಿಸಿದ್ದಾರೆ. ತಾಯಿಗೊಬ್ಬ ಕರ್ಣ, ಸತ್ಯನಾರಾಯಣ ಪೂಜಾಫಲ, ಸಾಂಗ್ಲಿಯಾನ-3, ಜನುಮದ ಜೋಡಿ, ಕಿಟ್ಟಿ, ಜಾಕಿ, ರಾಜ, ತಾಯಿ, ಶಬರಿ, ಮರಣದಂಡನೆ ಸೇರಿದಂತೆ 50ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Kannada film

ಸಂಕ್ರಾಂತಿ, ಮಹಾಮಾಯೆ, ಅಪ್ಪ, ಕೆಳದಿ ಚನ್ನಮ್ಮ, ಭಾಗೀರಥಿ, ಶ್ರೀ ರಾಘವೇಂದ್ರ ವೈಭವ, ಪಾ.ಪ.ಪಾಂಡು, ಶ್ರೀ ಕಲಾಭೈರವ ಮಹಾತ್ಮೆ ಸೇರಿದಂತೆ 20ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸುವರ್ಣ ಅಕಾಡೆಮಿ ಪ್ರಶಸ್ತಿ, ವರದಪ್ಪ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.