ಮಾನ್ವಿ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಾಜಾ ವೆಂಕಟಪ್ಪ ನಾಯಕ ನಾಮಪತ್ರ ಸಲ್ಲಿಕೆ………
ಮಾನ್ವಿ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ರಾಜಾ ವೆಂಕಟಪ್ಪ ನಾಯಕ ನಾಮಪತ್ರ ಸಲ್ಲಿಕೆ………

ಪ್ರತಿಷ್ಟೆಯ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ರಾಜಾವೆಂಕಟಪ್ಪ ನಾಯಕ ನಾಮಪತ್ರ ಸಲ್ಲಿಸಿದರು. ಕಳೆದೆರಡು ದಶಕಗಳಿಂದ ಕಾಂಗ್ರೆಸ್ ತನ್ನ ಭದ್ರ ಕೋಟೆಯೆಂದು ಬಿಂಬಿತವಾಗಿದ್ದು ,ಆದರೆ ಜೆಡಿಎಸ್ ಈ ಬಾರಿ ಮಾನ್ವಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಕಸರತ್ತು ನಡೆಸಿದೆ.ಈ ಹಿಂದಿನ ಚುನಾವಣೆಯಲ್ಲಿ ಕೆಲವೇ ಅಂತರದ ಮತಗಳಿಂದ ಸೋತ್ತಿದ್ದ ಜೆಡಿಎಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಈ ಚುನಾವಣೆಯಲ್ಲಿ ಬಾರಿ ಸದ್ದು ಮಾಡುತ್ತಿದ್ದಾರೆ. ಇವರ ಗೆಲುವಿಗಾಗಿ ಕ್ಷೇತ್ರದ ಕಾರ್ಯಕರ್ತರು ನಾಯಕರುಗಳು ಜೊತೆ ವಿವಿಧ ಹಳ್ಳಿಗಳಲ್ಲಿ ಪ್ರಾಚಾರ ಹಮ್ಮಿಕೊಂಡಿದ್ದು ಜನರಿಂದ ಬೆಂಬಲದ ಭರವಸೆಯ ಮಾತು ಕೇಳಿಬರುತ್ತಿವೆ.ಅಲ್ಲದೆ ತಮ್ಮ ಪಕ್ಷದ ಕಾರ್ಯಕರ್ತ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
Recent comments