ಮೊದಲ ಹಂತದ ಚಿತ್ರೀಕರಣ ಮುಗಿಸಿದ "ಭಗವಾನ್ ಶ್ರೀ ಕೃಷ್ಣ ಪರಮಾತ್ಮ"
ಮೊದಲ ಹಂತದ ಚಿತ್ರೀಕರಣ ಮುಗಿಸಿದ "ಭಗವಾನ್ ಶ್ರೀ ಕೃಷ್ಣ ಪರಮಾತ್ಮ" .

ಇತ್ತೀಚೆಗಷ್ಟೇ ಶ್ರೀಕೃಷ್ಣಜನ್ಮಾಷ್ಟಮಿ ಎಲ್ಲೆಡೆ ಅದ್ದೂರಿಯಾಗಿ ನಡೆದಿದೆ. ಇದೇ ಸಮಯದಲ್ಲಿ "ಭಗವಾನ್ ಶ್ರೀ ಕೃಷ್ಣ ಪರಮಾತ್ಮ" ಎಂಬ ಚಿತ್ರದ ಮೊದಲ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ. ಬೆಂಗಳೂರಿನಲ್ಲೇ ಚಿತ್ರೀಕರಣವಾಗಿದೆ. ಶೀರ್ಷಿಕೆ ಕೇಳಿದ ತಕ್ಷಣ ಇದೊಂದು ಪೌರಾಣಿಕ ಸಿನಿಮಾ ಅಂದುಕೊಳ್ಳುವುದು ಸಹಜ. ಆದರೆ ಇದೊಂದು ಪಕ್ಕಾ ಮಾಸ್ ಸಿನಿಮಾ ಎನ್ನುವ ನಿರ್ದೇಶಕರು ಈ ಶೀರ್ಷಿಕೆ ಇಟ್ಟ ಕಾರಣ ಸಿನಿಮಾ ನೋಡಿದ ಮೇಲೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ಭರತ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಭರತ್ ವಿಷ್ಣುಕಾಂತ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಅನೂಪ್ ಆಂಟೋನಿ ಈ ಚಿತ್ರದ ನಿರ್ದೇಶಕರು. ಹಿಂದೆ ಕಥಾವಿಚಿತ್ರ ಹಾಗೂ ಮೆಹಬೂಬ ಚಿತ್ರಗಳನ್ನು ನಿರ್ದೇಶಿಸಿದ ಅನೂಪ್ ಅವರಿಗೆ ಇದು ಮೂರನೇ ಚಿತ್ರ. ಕಥೆ, ಚಿತ್ರಕಥೆ ಕೂಡ ನಿರ್ದೇಶಕರದೆ. ಸಂಭಾಷಣೆ ಬಹದ್ದೂರ್ ಚೇತನ್ ಅವರದು. ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಹಾಗೂ ಮನುಗೌಡ ಅವರ ಸಂಕಲನ ಈ ಚಿತ್ರಕ್ಕಿದೆ. ಧ್ರುವನ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಯಶ್ ಶೆಟ್ಟಿ, ಯಶಸ್ ಸೂರ್ಯ, ಕಾಮಿಡಿ ಕಿಲಾಡಿಗಳು ಸೂರಜ್, ಶೋಭ್ ರಾಜ್, ಬಲರಾಜವಾಡಿ, ಸ್ವಾತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Recent comments