Skip to main content
ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು "ಯಾರೋ ನೀನು" ಹಾಡು.

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು "ಯಾರೋ ನೀನು" ಹಾಡು.

ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದರು "ಯಾರೋ ನೀನು" ಹಾಡು.

kannada film

ನನಗೆ ಇಂತಹ ದಿನ ಬರುತ್ತದೆ ಎಂದು ಊಹಿಸಿಯು ಇರಲಿಲ್ಲ‌. ನಾನು ಅಪ್ಪು ಇದಾಗ, ಅವನ ಅನೇಕ ಚಿತ್ರದ ಆಡಿಯೋ ರಿಲೀಸ್ ಮಾಡಿದ್ದೀನಿ. ಆಗ ನನಗೆ ಬರೀ ಅಪ್ಪು ಮಾತ್ರ ಕಾಣುತ್ತಿದ್ದ. ಈಗ ಬಿಡುಗಡೆ ಮಾಡಿರುವ ಹಾಡಿನಲ್ಲಿ ಅವನ ಕೋಟ್ಯಾಂತರ ಅಭಿಮಾನಿಗಳು ಕಾಣುತ್ತಿದ್ದಾರೆ. ಈ ಹಾಡಿನ ರಾಜ್ ಕಿಶೋರ್ ಅವರ ಸಾಹಿತ್ಯ- ಸಂಗೀತ ತುಂಬಾ ಚೆನ್ನಾಗಿದೆ. ಶಶಿಕುಮಾರ್ ಅದ್ಭುತವಾಗಿ ಹಾಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ಈ ಹಾಡಿನಲ್ಲಿ ಕಾಣಿಸುತ್ತಿದೆ .

ಇದನ್ನು ನಾನು ಬಿಡುಗಡೆ ಅನ್ನುವುದಿಲ್ಲ.‌ ಅರ್ಪಣೆ ಎನ್ನುತ್ತೇನೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ರಾಘವೇಂದ್ರ ರಾಜಕುಮಾರ್ ಹಾಡು ಬಿಡುಗಡೆ ಮಾಡಿ ಹಾರೈಸಿದರು ‌ ಕನ್ನಡದ ಸಾಕಷ್ಟು ಜನಪ್ರಿಯ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಹಾಗೂ ಹಿಂದಿ, ತೆಲುಗು, ಕನ್ನಡ, ತಮಿಳು, ಮಲೆಯಾಳಂ, ಬಂಗಾಳಿ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ "ಡಾಟರ್ ಆಫ್ ಇಂಡಿಯಾ" ಚಿತ್ರಕ್ಕೆ ಸಂಗೀತ ನೀಡಿ, ನಿರ್ದೇಶಿಸುತ್ತಿರುವ ರಾಜ್ ಕಿಶೋರ್ ಈ ಹಾಡನ್ನು ಬರೆದು ಸಂಗೀತ ನೀಡಿದ್ದಾರೆ. ಒಬ್ಬ ನಾಯಕನ ಚಿತ್ರಕ್ಕೊ, ಹುಟ್ಟುಹಬ್ಬ ಅಥವಾ ಮತ್ತಾವುದೋ ಸಂದರ್ಭಕ್ಕೋ ಹಾಡು ಬರೆದು ಬಿಡುಗಡೆ ಮಾಡುವುದೇ ಬೇರೆ. ಈ ಸಂದರ್ಭ ಬೇರೆ. ಅವರ ಮನೆಯವರು , ಅವರನ್ನು ಹತ್ತಿರದಿಂದ ಬಲ್ಲ ಎಲ್ಲರಿಗೂ ದುಃಖ ಆಗುವುದು ಸಹಜ‌. ಆದರೆ ಬರೀ ಈ ಊರು, ಈ ದೇಶವಲ್ಲದೇ, ಹೊರದೇಶಗಳಲ್ಲೂ ಇವರ ಸಾವಿಗೆ ನಮ್ಮವರನೇ ಕಳೆದುಕೊಂಡಿದ್ದೀವಿ ಎಂದು ದುಃಖಿಸುತ್ತಿದ್ದಾರಲ್ಲಾ ಇದೇ ನಾನು ಹಾಡು ಬರೆಯಲು ಪ್ರಮುಖ ಕಾರಣ. ಇದಕ್ಕೆ ಪ್ರೋತ್ಸಾಹ ನೀಡಿದ್ದ ನಿರ್ಮಾಪಕಿ ಭೈರವಿ ಅವರಿಗೆ, ಗಾಯಕ ಶಶಿಕುಮಾರ್ ಅವರಿಗೆ ಹಾಗೂ ಹಾಡು ಬಿಡುಗಡೆ ಮಾಡಿದ್ದ ರಾಘವೇಂದ್ರ ರಾಜಕುಮಾರ್ ಅವರಿಗೆ ಧನ್ಯವಾದ ಎಂದರು ರಾಜ್ ಕಿಶೋರ್. ದೇವರಿಗಾಗಿ ನಾನು ಯಾವುದೇ ವ್ರತ ಮಾಡಿಲ್ಲ. ಆದರೆ ನಾನು ಅಪ್ಪು ಅವರಿಗಾಗಿ ಈ ಹಾಡನ್ನು ಹಾಡುವಾಗ ವ್ರತ ಆಚಿರಿಸಿ ಹಾಡಿದ್ದೀನಿ.

ಅವರೆ ನನ್ನ ಪಾಲಿನ ದೇವರು ಎಂದರು ತಪ್ಪಾಗಲಾರದು. ಅವಕಾಶ ನೀಡಿದ ರಾಜ್ ಕಿಶೋರ್ ಹಾಗೂ ಭೈರವಿ ಅವರಿಗೆ ಅನಂತ ಧನ್ಯವಾದ ಎಂದರು ಗಾಯಕ ಶಶಿಕುಮಾರ್. ಚಿಕ್ಕಮಕ್ಕಳಿಂದ ಹಿಡಿದು ದೊಡ್ಡವರ ತನಕ ಅಪ್ಪು ಸರ್ ಅವರ ಸಾವಿನಿಂದ ಆಗುತ್ತಿರುವ ತಳಮಳ ಈ ಹಾಡನ್ನು ನಿರ್ಮಿಸಲು ಮುಖ್ಯ ಕಾರಣ. ಈ ಹಾಡು ನಿರ್ಮಾಣವಾಗಲು ಸಹಕಾರ ನೀಡಿದ ತಂಡಕ್ಕೆ ಹಾಗೂ ನೆರೆದಿರುವ ಗಣ್ಯರಿಗೆ ನನ್ನ ಧನ್ಯವಾದ ಎಂದರು ನಿರ್ಮಾಪಕಿ ಭೈರವಿ. ಸಮಾಜಸೇವಕರಾದ ಎಸ್ ಮಹೇಶ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.