Skip to main content
ಸೆಪ್ಟೆಂಬರ್ 17 ಕ್ಕೆ *"ಜಿಗ್ರಿದೋಸ್ತ್"* ಗಳ ಆಗಮನ..

ಸೆಪ್ಟೆಂಬರ್ 17 ಕ್ಕೆ *"ಜಿಗ್ರಿದೋಸ್ತ್"* ಗಳ ಆಗಮನ..

ಸೆಪ್ಟೆಂಬರ್ 17 ಕ್ಕೆ *"ಜಿಗ್ರಿದೋಸ್ತ್"* ಗಳ ಆಗಮನ.. ಸ್ನೇಹದ ಮಹತ್ವ ಸಾರಲಿದೆ ಈ ಚಿತ್ರ.

Kannada new film

"ಅಂಜದ ಗಂಡು", " ಯಾರಿಗೆ ಸಾಲತ್ತೆ ಸಂಬಳ" ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕರಾದ ಬಿ.ಎನ್.ಗಂಗಾಧರ್ ಅವರು ನಿರ್ಮಿಸಿರುವ ೨೭ ನೇ ಚಿತ್ರ "ಜಿಗ್ರಿದೋಸ್ತ್". ಈ ಚಿತ್ರ ಇದೇ ಸೆಪ್ಟೆಂಬರ್ 17ರಂದು ತೆರಗೆ ಬರಲಿದೆ. ನಟ ಹಾಗೂ ನಿರ್ದೇಶಕ ಎಸ್.ಮೋಹನ್ ಈ ಚಿತ್ರ ನಿರ್ದೇಶಿಸಿದ್ದಾರೆ.

ನನಗೆ ಗಂಗಾಧರ್ ಅವರು ಸುಮಾರು ೨೨ ವರ್ಷಗಳ ಪರಿಚಯ. ಅವರ "ಯಾರಿಗೆ ಸಾಲತ್ತೆ ಸಂಬಳ" ಚಿತ್ರದಲ್ಲಿ ನಟಿಸಲು ನನಗೆ ಅವಕಾಶ ನೀಡಿದ್ದರು. ಈಗ ಅವರದೇ ನಿರ್ಮಾಣದ ಚಿತ್ರ ನಿರ್ದೇಶನ ಮಾಡಿದ್ದೇನೆ. ಪ್ರಪಂಚದಲ್ಲಿ ಎಲ್ಲಾ ಸಂಬಂಧಿಗಳನ್ನು ನಮಗೆ ಅಪ್ಪ - ಅಮ್ಮ ಪರಿಚಯ ಮಾಡಿಕೊಟ್ಟರಷ್ಟೇ ತಿಳಿಯುತ್ತದೆ. ಆದರೆ ನಾವು ಇಷ್ಟ ಪಟ್ಟು ಪಡೆಯುವ ಸಂಬಂಧ ಸ್ನೇಹ. ಹಾಗಾಗಿ ಎಲ್ಲಕ್ಕಿಂತ ಮೀರಿದ್ದು ಸ್ನೇಹ. ಇದನ್ನೇ ನಮ್ಮ ಚಿತ್ರದಲ್ಲಿ ಹೇಳಿದ್ದೇವೆ.

ಸ್ಕಂದ ಅಶೋಕ್ ಹಾಗೂ ಚೇತನ್ ಇಬ್ಬರೂ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ಅಕ್ಷತ, ಸುಷ್ಮ ನಾಯಕಿಯರು. ಪಂಚಭಾಷಾ ನಟ ವಿನೋದ್ ಆಳ್ವ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಚಿತ್ಕಲಾ ಬಿರಾದಾರ್ , ಇಫ್ರಾನ್, ಮಂಜುನಾಥ್, ರಮೇಶ್ ಪಂಡಿತ್, ಟಿನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದು ಚಿತ್ರ ಹಾಗೂ ಚಿತ್ರತಂಡದ ಬಗ್ಗೆ ಮಾಹಿತಿ ನೀಡಿದರು ಮೋಹನ್. ನಾನು ಇಲ್ಲಿಯವರೆಗೂ ಇಪ್ತತ್ತೇಳು ಚಿತ್ರಗಳ ನಿರ್ಮಾಣ ಮಾಡಿದ್ದೇನೆ. ಕೋವಿಡ್ ಬರದಿದ್ದರೆ ಕಳೆದವರ್ಷ ನಮ್ಮ ಚಿತ್ರ ಬಿಡುಗಡೆ ಅಗಬೇಕಿತ್ತು. ಆದರೆ ಈಗ ಬಿಡುಗಡೆ ಮಾಡುತ್ತಿದ್ದೇವೆ ನೋಡಿ ಹರಸಿ ಎಂದರು

Kannada new film

ಬಿ.ಎನ್.ಗಂಗಾಧರ್. ನಾಯಕರಲೊಬ್ಬರಾದ ಚೇತನ್ ಮತಾನಾಡುತ್ತಾ, ನಾನು ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪಾತ್ರ ನೀಡಿದ ನಿರ್ಮಾಪಕ - ನಿರ್ದೇಶಕರಿಗೆ ಧನ್ಯವಾದ ಎಂದರು. ನಟಿಯರಾದ ಅಕ್ಷತ, ಸುಷ್ಮ ಕಲಾವಿದರಾದ ಇರ್ಫಾನ್ ಹಾಗೂ ಚಿತ್ರದ ಸಹ ನಿರ್ಮಾಪಕ ಹಾಗೂ ನಟ ಮಂಜುನಾಥ್ ಹಾಗೂ ಸಂಗೀತ ನಿರ್ದೇಶಕ ದಿನೇಶ್ ಕುಮಾರ್ ಮಾಧ್ಯಮದ ಮುಂದೆ ಚಿತ್ರದ ಬಗ್ಗೆ ಮಾಹಿತಿ ನೀಡಿದರು.

ಪ್ರಸಾದ್ ಬಾಬು ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಮದನ್ - ಹರಿಣಿ ಅವರ ನೃತ್ಯ ನಿರ್ದೇಶನ ಈ‌ ಚಿತ್ರಕ್ಕಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.