ಮಾತಿನಮನೆಯಲ್ಲಿ 'ಬಡವ ರಾಸ್ಕಲ್'
ಮಾತಿನಮನೆಯಲ್ಲಿ 'ಬಡವ ರಾಸ್ಕಲ್'

ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ 'ಬಡವ ರಾಸ್ಕಲ್' ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ವಾಯ್ಸ್ ಡಬ್ಬಿಂಗ್ ನಡೆಯುತ್ತಿದೆ. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ. ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೆ ಈ ಚಿತ್ರದ ಕಥಾಹಂದರ.